ಹೊಸದಿಗಂತ ಡಿಜಿಟಲ್ ಡೆಸ್ಕ್:
ನನಗೆ ತಿಳಿಯದೆ ನನ್ನ ಹೆಂಡತಿ ನಮ್ಮ ಮನೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾಳೆಯೇ? ಇದೆಲ್ಲ ನಾಟಕ ಎಂದು ಹೇಳುವ ಮೂಲಕ ಸಿಎಂ ಪತ್ನಿ ಮುಡಾ ಸೈಟ್ ವಾಪಸ್ ನೀಡಿರುವ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ಸೈಟ್ ತಗೊಂಡ ಮೇಲೆ ವಾಪಸ್ ಯಾಕೆ ಕೊಡಬೇಕು? ಸಿದ್ದರಾಮಯ್ಯ ಸಲಹೆಯಿಂದಲೇ ಅವರ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ. ನಮ್ಮ ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲವೂ ನಾಟಕ? ಎಂದು ಕಿಡಿಕಾರಿದ್ದಾರೆ.