ಮದ್ಯದ ಅಮಲಿನಲ್ಲಿ ಪತ್ನಿಯನ್ನೇ ಕೊಂದ ಪತಿ, ತಾಯಿ ಹತ್ಯೆ ಕಂಡು ಬೆಚ್ಚಿಬಿದ್ದ ಮಗ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೋರ್ವ ಪತ್ನಿಯೊಂದಿಗೆ ಜಗಳವಾಡಿ ಕೊಲೆಗೈದಿರುವ ಘಟನೆ ನಗರದ ತೆಂಕ ಎಕ್ಕಾರು ಗ್ರಾಮದಲ್ಲಿ ನಡೆದಿದೆ.

ದುರ್ಗೇಶ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಸರಿತಾಳೊಂದಿಗೆ ಜಗಳವಾಡಿದ್ದು, ಜಗಳ ತಾರಕಕ್ಕೇರಿ ಮರದ ರೀಪಿನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ತಾಯಿಯ ಹತ್ಯೆ ಕಂಡು ಮಗ ರಾಹುಲ್ ಹೆದರಿ ತನ್ನ ಅಜ್ಜಿ ಮನೆಗೆ ಓಡಿ ಹೋಗಿದ್ದಾನೆ.

ಸ್ವತಃ ಆರೋಪಿಯೇ ಇಂದು ಬೆಳಗ್ಗೆ ತನ್ನ ಅಣ್ಣ ಮಧುಗೆ ಕರೆ ಮಾಡಿ ಸರಿತಾ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಮಧು ಸ್ಥಳಕ್ಕೆ ಬಂದು ನೋಡಿದಾಗ ದುರ್ಗೇಶನೇ ಸರಿತಾಳನ್ನು ಕೊಲೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!