ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರಮಂಗಲದಲ್ಲಿ ತನ್ನ ಪತ್ನಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿದ ಆರೋಪಿ ರಾಕೇಶ್ ನನ್ನು ಪೊಲೀಸರು ಬಂಧಿಸಿ ಮ್ಯಾಜಿಸ್ಟ್ರೇಟ್ ನಿವಾಸದಲ್ಲಿ ಹಾಜರು ಪಡಿಸಿದ್ದಾರೆ.
ವಿಚಾರಣೆಯ ನಂತರ ಮ್ಯಾಜಿಸ್ಟ್ರೇಟ್ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪ್ರಸ್ತುತ, ರಾಕೇಶ್‌ನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಪ್ರಕರಣದಲ್ಲಿ ಆರೋಪಿ ರಾಕೇಶ್ ತನ್ನ ಪತ್ನಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿದ್ದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಗಂಡ-ಹೆಂಡತಿಯ ನಡುವಿನ ದೀರ್ಘಕಾಲದ ಮನಸ್ತಾಪವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.