ಇಬ್ಬರು ಗಂಡಂದಿರ ಮಧ್ಯೆ ಹೆಂಡತಿಯ ಡಬಲ್ ಗೇಮ್: ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ!

ಹೊಸದಿಗಂತ ವರದಿ, ಚಿಕ್ಕಬಳ್ಳಾಪುರ:

ಸ್ವಂತ ತನ್ನ ಅಕ್ಕನ ಗಂಡನನ್ನೇ ಮದುವೆಯಾಗಿದ್ದ ಮಹಿಳೆ, ಕೊರಿಯರ್ ಬಾಯ್ ಜೊತೆ ಪ್ರೇಮಾಯಣ ನಡೆಸಿ, ಆತನನ್ನೂ ಮದುವೆಯಾಗಿ ಇಬ್ಬರು ಗಂಡಂದಿರ ಜೊತೆಗೆ ಡಬಲ್ ಗೇಮ್ ಆಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ದಿವ್ಯಾ ಎಂಬ ಮಹಿಳೆ ಡಬಲ್ ಗ್ರಾಜುಯೇಟ್ ಬಿ.ಎಡ್. ಎಂ.ಎಸ್ಸಿ ವಿದ್ಯಾಭ್ಯಾಸ ಮಾಡಿದ್ದು, ಮುಳಬಾಗಿಲಿನ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಉದ್ಯೋಗದಲ್ಲಿದ್ದಳು. ಮದುವೆಯಾಗಿ ಕೆಲ ತಿಂಗಳಲ್ಲೆ ಕೋಲಾರದ ಕಂಬಂಪಲ್ಲಿ ನಿವಾಸಿ, ಕೊರಿಯರ್ ಬಾಯ್ ಚಂದ್ರಶೇಖರ್ ಗೆ ಪರಿಚಯವಾಗಿ ಪ್ರೀತಿ ಪ್ರೇಮದ ನಡುವೆ ಆತನನ್ನೂ ಎರಡನೇ ಮದುವೆ ಮಾಡಿಕೊಂಡಿದ್ದಳು ಎನ್ನಲಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಣಿಗಾನಹಳ್ಳಿ ನಿವಾಸಿ ಜಯಮ್ಮ ಹಾಗೂ ವಿ ನಾರಾಯಣಪ್ಪ ದಂಪತಿಗೆ ಮೂರು ಜನ ಹೆಣ್ಣು ಮಕ್ಕಳು. ಅದರಲ್ಲಿ ದೊಡ್ಡ ಮಗಳು ಮಂಜುಳಾಳನ್ನು ಆಂಧ್ರದ ವಿ ಕೋಟೆ ಗ್ರಾಮದ ಸುಬ್ರಮಣ್ಯಗೆ ಕೊಟ್ಟು ಮದುವೆ ಮಾಡಿಕೊಟ್ಟಿದ್ದರು.

ಮಂಜುಳಾರ ಕೊನೆಯ ತಂಗಿಯಾಗಿದ್ದ ದಿವ್ಯಾ ಸ್ವತಃ ತನ್ನ ಅಕ್ಕನ ಗಂಡ ಬಾವ ಸುಬ್ರಮಣ್ಯ ನನ್ನು ಪ್ರೀತಿಸಿದಳು. ಕಾಡಿ ಬೇಡಿ ಅತ್ತು ಕರೆದು ಭಾವನನ್ನೇ ಮದುವೆ ಮಾಡಿಕೊಂಡಿದ್ದಳು. ಆದರೆ ಮದುವೆಯಾಗಿ ಕೇವಲ ಹತ್ತು ತಿಂಗಳಲ್ಲೇ ಪರಿಚಯಸ್ಥನಾಗಿದ್ದ ಕೊರಿಯರ್ ಬಾಯ್ ಚಂದ್ರಶೇಖರ್ ಎಂಬುವರನ್ನು ಪ್ರೀತಿಸತೊಡಗಿದಳು. ಮನೆಯವರ ವಿರೋಧದ ನಡುವೆ ಮದುವೆಯೂ ಮಾಡಿಕೊಂಡಳು.

ಮುಳಬಾಗಿಲಿನ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಸೀನಿಯರ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವ್ಯಾ, ಮದುವೆಯಾಗಿ ಕೆಲ ತಿಂಗಳಲ್ಲೆ ಕೋಲಾರದ ಕೆ.ಜೆ.ಎಫ್​ ನ ಕಂಬಂಪಲ್ಲಿ ನಿವಾಸಿ 29 ವರ್ಷದ ಕೊರಿಯರ್ ಬಾಯ್ ಚಂದ್ರಶೇಖರ್ ಗೆ ಪರಿಚಯವಾಗಿದ್ದಾಳೆ. ಪ್ರೀತಿ ಪ್ರೇಮ ಅಂತಾ ಸುತ್ತಾಡಿದ್ದಾಳೆ. ಇದ್ದನ್ನರಿತ ಆಕೆಯ ಪೋಷಕರು ಮಗಳು ದಿವ್ಯಾಳನ್ನು ಕೋಲಾರ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಡಿ.ಸಿ.ಸಿ ಬ್ಯಾಂಕ್ ಗೆ ವರ್ಗಾವಣೆ ಮಾಡಿಸಿದ್ದರು.

ಅಲ್ಲಿಯೂ ದಿವ್ಯ ಕೊರಿಯರ್ ಬಾಯ್ ಜೊತೆ ತನ್ನ ಪ್ರೇಮ ಪುರಾಣ ಮುಂದುವರೆಸಿದ್ದಾರೆ. ದಿವ್ಯಾ-ಚಂದ್ರಶೇಖರ್ ಪ್ರೇಮಕ್ಕೆ, ಮರು ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾದ ಕಾರಣ ಇಬ್ಬರೂ ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ.

ಇದರಿಂದ ಆಕೆಯ ಪೋಷಕರು ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಪೊಲೀಸರು ಇಬ್ಬರನ್ನೂ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ. ಇಬ್ಬರೂ ಜೂನ್ 10ರಂದೇ ಮದುವೆ ಆಗಿದ್ದು, ಅಗಸ್ಟ್​ 10ರಂದು ಬಂಗಾರಪೇಟೆಯಲ್ಲಿ ಮದುವೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಇದರಿಂದ ತಮ್ಮನ್ನು ತಮ್ಮ ಪಾಡಿಗೆ ಬದುಕಲು ಬಿಡಿ ಎಂದು ಪೊಲೀಸರು ಹಾಗೂ ತಂದೆ ತಾಯಿಯ ಎದುರು ಗೋಗರೆದಿದ್ದಾರೆ.

ಚಿಕ್ಕಬಳ್ಳಾಪುರ ಪೊಲೀಸ್ ಠಾಣೆ ಮುಂದೆ ನಮ್ಮ ಮಗಳನ್ನು ನಮ್ಮ ಜೊತೆ ಕಳುಹಿಸಿ ಕೊಡಿ ಎಂದು ದಿವ್ಯಾಳ ವೃದ್ದ ತಂದೆ ತಾಯಿ, ಅತ್ತು ಕರೆದು ಗೋಳಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!