ಹೊಸದಿಗಂತ ವರದಿ, ಮಡಿಕೇರಿ:
ಕೆಲಸಕ್ಕೆ ತೆರಳಿದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಪಾಲಿಬೆಟ್ಟದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕ ಮಂಜು (37 ) ಎಂಬವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟದ ಮೂಕ ಕಾಫಿ ತೋಟದಲ್ಲಿ ಕಾರ್ಮಿಕರಾಗಿರುವ ಮಂಜು ಬುಧವಾರ ಬೆಳಗ್ಗೆ ಇತರರೊಂದಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದಾಳಿ ಮಾಡಿದ ಕಾಡಾನೆ ದಂತದಿಂದ ಚುಚ್ಚಿ ಗಾಯಗೊಳಿಸಿದೆ. ಪಾಲಿಬೆಟ್ಟ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಗಾಯಾಳುವನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.