Friday, February 3, 2023

Latest Posts

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ ರೂ.15 ಲಕ್ಷಕ್ಕೆ ಹೆಚ್ಚಳ: ಸಚಿವ ಅಶೋಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ.7.5 ಲಕ್ಷ ಪರಿಹಾರ ಧನವನ್ನು ರೂ.15 ಲಕ್ಷಕ್ಕೆ ಹೆಚ್ಚಳ ಮಾಡಿದೆ. ಕಾಡನೆ ಹಾವಳಿ ಹೆಚ್ಚಿರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಗುರುವಾರ ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಪ್ರಾಣೇಶ್.ಎಂ.ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರು ಉತ್ತರಿಸಿದ ಅವರು, ಕಾಡಾನೆ ಹಾಗೂ ಇತರೆ ವನ್ಯಪ್ರಾಣಿಗಳು ಕಾಡಿನಿಂದ ಹೊರಬಾರದಂತೆ ತಡೆಯಲು ವನ್ಯಪ್ರಾಣಿಗಳಿಗಾಗಿ ಅರಣ್ಯ ಪ್ರದೇಶಗಳ ಒಳಗೆ ನೀರಿನ ಲಭ್ಯತೆ ಹೆಚ್ಚಿಸಲು ರಕ್ಷಿತ ಅರಣ್ಯಗಳಲ್ಲಿ ಕೆರೆಗಳ ನಿರ್ಮಾಣ ಹಾಗೂ ಇರುವ ಕೆರೆಗಳ ಪುನಶ್ಚೇತನಗೊಳಿಸಲಾಗಿದೆ ಎಂದರು.

ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ, ಕಂದಕ ಹಾಗೂ ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಇದುವರೆಗೂ 762 ಕಿ.ಮೀ ಆನೆ ತಡೆ ಕಂದಕ, 1106 ಕಿ.ಮೀ ಸೌರಶಕ್ತಿ ಬೇಲಿ, 100 ಕಿ.ಮೀ ರೈಲ್ವೆ ಹಳಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಎಂದು ಹೇಳಿದರು.

ಕಾಡು ಪ್ರಾಣಿಯಿಂದ ಉಂಟಾಗುವ ಶಾಶ್ವತ ಅಂಗವಿಕಲತೆಗೆ ನೀಡುತ್ತಿದ್ದ ಪರಿಹಾರಧನ ಮೊತ್ತವನ್ನು ರೂ.5 ರಿಂದ ರೂ.10 ಲಕ್ಷಕ್ಕೆ, ಭಾಗಶಃ ಅಂಗವಿಕಲತೆ ಮೊತ್ತವನ್ನು ರೂ.2.50 ಲಕ್ಷದಿಂದ ರೂ.5ಲಕ್ಷಕ್ಕೆ, ಗಾಯಗೊಂಡವರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.30 ಸಾವಿರದಿಂದ ರೂ.60 ಸಾವಿರಕ್ಕೆ, ಆಸ್ತಿ ನಷ್ಟದ ಮೊತ್ತವನ್ನು ರೂ.10 ಸಾವಿರದಿಂದ ರೂ.20 ಸಾವಿರಕ್ಕೆ ಹಾಗೂ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಧನಾತ್ಮಕ ಪರಿಹಾರದ ಜೊತೆಗೆ 5 ವರ್ಷದ ಅವಧಿ ನೀಡುತ್ತಿದ್ದ ಮಾಶಾಸನ ಮೊತ್ತ ರೂ.2 ಸಾವಿರವನ್ನು ರೂ.4 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!