ಹೊಸದಿಗಂತ ವರದಿ ಹಾಸನ:
ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಚಿಕ್ಕಸಾಲಾವಾರ ಗ್ರಾಮದ ಬಳಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ರೇವತಿ (50) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಬೈಕ್‌ನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಉಮೇಶ್ ಮತ್ತು ರೇವತಿ ಎಂಬುವವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ರೇವತಿ ಅವರ ತಲೆಗೆ ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ದಂಪತಿ ಇಬ್ಬರು ಪಾರಾಗಿದ್ದಾರೆ.
ಗಾಯಾಳುವಿಗೆ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.