Monday, November 10, 2025

ಹಾಸನ ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ: ಭೀಮಾ ಆನೆಯ ಒಂದು ದಂತ ಕಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆಯ ವೇಳೆ ಭೀಮಾ ಒಂದು ದಂತ ಕಳೆದುಕೊಂಡಿರುವ ಘಟನೆ ನಡೆದಿದೆ.

ಬೇಲೂರು ತಾಲ್ಲೂಕಿನ ಜಗಬೋರನಹಳ್ಳಿ ಗ್ರಾಮದಲ್ಲಿ ಭೀಮಾ ಹಾಗೂ ಕ್ಯಾಪ್ಟನ್ ಎದುರಾಗಿ ಭೀಕರ ಕಾಳಗ ನಡೆಸಿವೆ. ಕಾಳಗದ ವೇಳೆ ಸಿಟ್ಟಿನಲ್ಲಿ ಭೀಮಾ ಮರಕ್ಕೆ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಭೀಮನ ಒಂದು ದಂತ ಮುರಿದು ಬಿದ್ದಿದೆ.

ದಂತ ಕಳೆದುಕೊಂಡು ಒಂಟಿಸಲಗ ಭೀಮಾ ಘೀಳಿಡುತ್ತಿದ್ದು, ಭೀಮನ ಸೊಂಡಿಲಿನ ಬಳಿ ರಕ್ತ ಸುರಿಯುತ್ತಿದೆ.ಕಾಳಗದಲ್ಲಿ ಕ್ಯಾಪ್ಟನ್‌ಗೂ ಗಂಭೀರ ಸ್ವರೂಪದ ಗಾಯಗಳಾಗಿವೆ.

ಕಾಡಾನೆ ಭೀಮಾ ಮಲೆನಾಡು ಭಾಗದ ಜನರ ಪ್ರೀತಿ ಪಾತ್ರವಾಗಿದ್ದಾನೆ. ದಂತ ಮುರಿದುಕೊಂಡಿದ್ದನ್ನು ಕಂಡು ಜನರು ಮರುಕಪಟ್ಟಿದ್ದಾರೆ.

error: Content is protected !!