September 6, 2026
Sunday, September 6, 2026
spot_img

ಉಜಿರೆಯಲ್ಲಿ ಕಾಡಾನೆ ಪ್ರತ್ಯಕ್ಷ: ಜನರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜು ಸಮೀಪ ಭಾನುವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಕಾಡಾನೆ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದಾರೆ. ಕಾಡಾನೆಯನ್ನು ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಹಾರಿಸಿದ ಗುಂಡುಗಳ ಪೈಕಿ ಎರಡು ಗುಂಡುಗಳು ಸಲಗಕ್ಕೆ ತಗುಲಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ 3 ಮುಸುತ್ತು ಗುಂಡು ಹಾರಿಸಿದ್ದು ಇದರಲ್ಲಿ 2 ಗುಂಡುಗಳು ಆನೆಗೆ ತಗುಲಿರುವ ಶಂಕೆ ವ್ಯಕ್ತವಾಗಿದೆ.

ಜನವಸತಿ ಹಾಗೂ ಶಿಕ್ಷಣ ಸಂಸ್ಥೆಗಳ ಸಮೀಪ ಕಾಡಾನೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಕಾಡಾನೆ ಮತ್ತೆ ಕಾಣಿಸಿಕೊಂಡಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !