ಹೊಸದಿಗಂತ ವರದಿ ಮಡಿಕೇರಿ:
ಕಾಡಾನೆಯೊಂದು ಚಹಾದ ಅಂಗಡಿ ಮೇಲೆ ದಾಳಿ ನಡೆಸಿರುವ ಘಟನೆ ಮಂಗಳವಾರ ಬೆಳಗ್ಗೆ ನೆಲ್ಲಿಹುದಿಕೇರಿ ಬಳಿ ನಡೆದಿದೆ.
ಅದೃಷ್ಟವಶಾತ್ ಅಂಗಡಿಯಲ್ಲಿದ್ದ ದಂಪತಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆ ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ ದಾಳಿ ಮಾಡಿದೆ.
ಅಂಗಡಿಯಲ್ಲಿದ್ದ ಜಬ್ಬಾರ್ ಹಾಗೂ ಪತ್ನಿ ಕಾಡಾನೆ ದಾಳಿಯಿಂದ ಪಾರಾಗಲು ಯತ್ನಿಸಿದ್ದು, ಈ ಸಂದರ್ಭ ಜಬ್ಬಾರ್’ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಂಗಡಿಯಲ್ಲಿದ್ದ ತಿಂಡಿ ಪದಾರ್ಥಗಳನ್ನು ಹಾಗೂ ಸಾಮಾಗ್ರಿಗಳನ್ನು ಆನೆ ಎಳೆದು ಬಿಸಾಡಿದೆ.
ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣದಲ್ಲಿದ್ದವರು ಕಿರುಚಾಡಿದಾಗ ನಲ್ವತ್ತೆಕ್ರೆ ಮಾರ್ಗವಾಗಿ ದಾಟಿದ ಕಾಡಾನೆ ಅದೇ ಮಾರ್ಗವಾಗಿ ಬರುತ್ತಿದ್ದ ಕಾರಿನ ಮೇಲೂ ಸಹ ದಾಳಿ ಮಾಡಿರುವುದಾಗಿ ಹೇಳಲಾಗಿದೆ.