ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ವ್ಯಾಪ್ತಿಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚುತ್ತಲಿದ್ದು ಇತರ ಪ್ರದೇಶಗಳಿಗೂ ವ್ಯಾಪಿಸಿದೆ. ಅರಣ್ಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾಡ್ಗಿಚ್ಚು ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಶುಕ್ರವಾರ ರಾತ್ರಿಯಿಂದ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. 500ಕ್ಕೂ ಅಧಿಕ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಭಸ್ಮವಾಗಿತ್ತು.