ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಪಶ್ಚಿಮಘಟ್ಟ ಭಾಗ ಹಾಗೂ ಶೋಲಾ ಅರಣ್ಯದಲ್ಲಿ ಕಾಳ್ಗಿಚ್ಚು ಆರಂಭವಾಗಿದ್ದು, ಕೆಮ್ಮಣ್ಣು ಗುಂಡಿ ಗುಡ್ಡದಲ್ಲಿ ನಿನ್ನೆ ತಡರಾತ್ರಿ ಬೆಂಕಿ ಹೊತ್ತಿದೆ.
ಕಾಳ್ಗಿಚ್ಚಿನಿಂದಾಗಿ ನೂರಾರು ಎಕರೆ ಪ್ರದೇಶ ನಾಶವಾಗಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಿಂದಿಸಿದ್ದಾರೆ.
ಹತ್ತಾರು ಪ್ರಾಣಿ ಪಕ್ಷಿಗಳು ಕಾಳ್ಗಿಚ್ಚಿಗೆ ಬಲಿಯಾಗಿವೆ.