ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಲಾಸ್ ಎಂಜಲ್ಸ್ ನಲ್ಲಿ ಹಬ್ಬಿರುವ ಕಾಡ್ಗಿಚ್ಚು ಈಗಾಗಲೇ ಐದು ಮಂದಿಯ ಜೀವ ತೆಗೆದಿದ್ದು, ಲಕ್ಷಾಂತರ ಎಕರೆ ಕಾಡನ್ನು ನಾಶ ಮಾಡಿದೆ.
ಇತ್ತ ಬಾಲಿವುಡ್ ಬೆಡಗಿ ನೋರಾ ಫತೇಹಿ ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚಿನ ಮಧ್ಯೆ ಸಿಕ್ಕಿಬಿದ್ದಿದ್ದಾರೆ. ಸದ್ಯ ನಟಿ ಉಳಿದುಕೊಂಡಿದ್ದ ಜಾಗದಿಂದ ಸ್ಥಳಾಂತರವಾಗಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿದ್ದಾರೆ.
ಇದರ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ನಾನು ಲಾಸ್ ಏಂಜಲೀಸ್‌ನಲ್ಲಿದ್ದೇನೆ. ನಾನು ಈ ರೀತಿಯ ಕಷ್ಟದ ಪರಿಸ್ಥಿಯನ್ನೂ ಎಂದಿಗೂ ನೋಡಿಲ್ಲ. 5 ನಿಮಿಷಗಳ ಹಿಂದೆ ಇಲ್ಲಿಂದ ಬೇರೆ ಕಡೆ ಶಿಫ್ಟ್ ಆಗಬೇಕು ಎಂಬ ಆದೇಶವನ್ನು ಪಡೆದುಕೊಂಡಿದ್ದೇವೆ. ಆದ್ದರಿಂದ ನಾನು ನನ್ನ ಎಲ್ಲಾ ವಸ್ತುಗಳನ್ನು ತ್ವರಿತವಾಗಿ ಪ್ಯಾಕ್ ಮಾಡಿದ್ದೇನೆ. ನಾನು ಈ ಪ್ರದೇಶದಿಂದ ಸ್ಥಳಾಂತರಿಸುತ್ತಿದ್ದೇನೆ. ಲಾಸ್ ಏಂಜಲೀಸ್‌ನಲ್ಲಿರುವ (Los Angles) ಜನರು ಸುರಕ್ಷಿತವಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ನೋರಾ ವಿಡಿಯೋದಲ್ಲಿ ಹೇಳಿದ್ದಾರೆ.
ಅಂದಹಾಗೆ, ಅಮೆರಿಕದ (America) ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ.