ವನ್ಯಜೀವಿ ದಾಂಧಲೆ: ವಯನಾಡಿನಲ್ಲಿ ಭುಗಿಲೆದ್ದ ಜನಾಕ್ರೋಶ, ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡ್‌ನಲ್ಲಿ ನಡೆಯುತ್ತಿರುವ ವನ್ಯ ಜೀವಿ ದಾಳಿ ನಾಗರಿಕರನ್ನು ಆಕ್ರೋಶಕ್ಕೀಡುಮಾಡಿದ್ದು, ಜನತೆ ಬೀದಿಗಿಳಿದು ಪ್ರತಿಭಟನೆ ಕೈಗೆತ್ತಿಕೊಂಡಿದ್ದಾರೆ.

ಪುಲ್ಪಲ್ಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಪ್ರತಿಭಟನಾನಿರತರ ಮೇಲೆ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಶನಿವಾರ ಪ್ರತಿಭಟನೆಯ ಕಾವು ಏಕಾಏಕಿ ಭುಗಿಲೆದ್ದಿದ್ದು, ಪೊಲೀಸರು ಪ್ರತಿಭಟನಾನಿರತರ ಮನವೊಲಿಸುವ ಪ್ರಯತ್ನ ಮಾಡಿದರೂ, ಅದು ಫಲ ನೀಡಲಿಲ್ಲ. ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಇದರಿಂದ ಕೆರಳಿದ ಪ್ರತಿಭಟನಾ ನಿರತರು ಪೋಲೀಸ್, ಅರಣ್ಯ ಇಲಾಖೆ ವಾಹನದ ಮೇಲೆ ದಾಳಿ ನಡೆಸಿದರು. ಈ ಘರ್ಷಣೆಯಲ್ಲಿ ಪ್ರತಿಭಟನಾನಿರತರು ಮತ್ತು ಪೋಲೀಸರು ಗಾಯಗೊಂಡಿದ್ದಾರೆ.

ಈ ನಡುವೆ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಧ್ಯಪ್ರವೇಶಿಸಿದ್ದು, ವಯನಾಡಿನಲ್ಲಿ ವನ್ಯಜೀವಿ ದಾಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲು ಮಂಗಳವಾರ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಕರೆಯುವಂತೆ ಸೂಚಿಸಿದ್ದಾರೆ. ಸಧ್ಯ ವಯನಾಡಿನ ಪರಿಸರ ಪ್ರವಾಸೋದ್ಯಮ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!