ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾಗಿದೆ. ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲಿದೆ. ಆದರೆ ಮಿತ್ರಪಕ್ಷ ಜೆಡಿಎಸ್ ಮಾತ್ರ ಧರಣಿಯಿಂದ ದೂರ ಉಳಿದಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈಗಾಗಲೇ ಪ್ರತಿಭಟನೆ ಆರಂಭವಾಗಿದೆ. ಮಿತ್ರ ಪಕ್ಷ ಜೆಡಿಎಸ್ ಈ ಪ್ರತಿಭಟನೆಗೆ ಬೆಂಬಲಿಸಿಲ್ಲ.
ಬಿಜೆಪಿ-ಜೆಡಿಎಸ್ ಸದಸ್ಯರು ಇದೀಗ ಬೆಲೆ ಏರಿಕೆ ನೀತಿ ವಿರುದ್ಧ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸುವಲ್ಲಿ ವಿಫಲವಾಗಿವೆ. ಈ ಬಗ್ಗೆ ಜೆಡಿಎಸ್ ಸದಸ್ಯರು ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.