ನಾಳೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾಳೆ ಸಿಎಂ ಸ್ಥಾನಕ್ಕೆ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಎಎಪಿ ಮೂಲಗಳು ಸೋಮವಾರ ತಿಳಿಸಿವೆ.

ಇನ್ನೆರಡು ದಿನಗಳಲ್ಲಿ ರಾಜೀನಾಮೆ ಸಲ್ಲಿಸುವುದಾಗಿ ಕೇಜ್ರಿವಾಲ್ ಭಾನುವಾರ ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಸಮಯ ಕೋರಿದ್ದಾರೆ.

ಅಬಕಾರಿ ನೀತಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಜನರು ತಮ್ಮ ಪ್ರಾಮಾಣಿಕತೆಯನ್ನು ದೃಢಪಡಿಸಿದ ನಂತರವೇ ಮುಖ್ಯಮಂತ್ರಿಯಾಗಿ ತಮ್ಮ ಪಾತ್ರವನ್ನು ಪುನರಾರಂಭಿಸುವುದಾಗಿ ಘೋಷಿಸಿದರು.

ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರವನ್ನು ನೀಡಿದಾಗ ಮಾತ್ರ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ
ಎಂದು ಅವರು ಹೇಳಿದರು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!