CINE | ಅಭಿ-ಅವಿವಾ ರಿಸೆಪ್ಷನ್‌ಗೆ ಬರಲಿದ್ದಾರಾ ಬಿಗ್ ಬಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅದ್ಧೂರಿ ವಿವಾಹ ನಡೆದಿದ್ದು, ಇಂದು ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್ ಬರುವ ನಿರೀಕ್ಷೆ ಇದೆ, ಮದುವೆಗೆ ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಸಾಕಷ್ಟು ಸಿನಿ ಗಣ್ಯರು ಬಂದಿದ್ದರು. ಈಗ ಆರತಕ್ಷತೆಗೆ ಸಾಕಷ್ಟು ಮಂದಿ ಬರುವ ನಿರೀಕ್ಷೆ ಇದ್ದು, ಎಲ್ಲ ತಯಾರಿ ಮಾಡಲಾಗಿದೆ.

ತ್ರಿಪುರವಾಸಿನಿಯಲ್ಲಿ ಅದ್ಧೂರಿ ವಿವಾಹ ನೆರವೇರಲಿದ್ದು, 10 ಸಾವಿರಕ್ಕೂ ಹೆಚ್ಚು ಗಣ್ಯರು ಬರುವ ನಿರೀಕ್ಷೆ ಇದೆ. ರಜನೀಕಾಂತ್, ಚಿರಂಜೀವಿ, ರಾಮ್ ಚರಣ್ ತೇಜ, ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ, ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಸಾಕಷ್ಟು ಮಂದಿ ಭಾಗಿಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!