ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೂಡ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ (ಎಸ್‌ಪಿ)ಗೆ ನಟ ಅಭಿಷೇಕ್ ಬಚ್ಚನ್ ಸೇರುತ್ತಾರೆ, ಅಲಹಾಬಾದ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಪಕ್ಷದಿಂದಾಗಲಿ ಅಥವಾ ಅಭಿಷೇಕ್ ಬಚ್ಚನ್ ಅವರಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.