ಕೆಲವು ದಿನಗಳಲ್ಲಿ ನನ್ನ ದಾಖಲೆಯನ್ನು ಮುರಿಯುತ್ತೀರಿ: ಕೊಹ್ಲಿಗೆ ಶುಭಾಶಯ ಕೋರಿದ ತೆಂಡುಲ್ಕರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿರಾಟ್ ಕೊಹ್ಲಿ ಈಡನ್​ ಗಾರ್ಡನ್​ ಕ್ರೀಡಾಂಗಣದಲ್ಲಿ ಇಂದಿನ ಪಂದ್ಯದಲ್ಲಿ ಸಚಿನ್ ತೆಂಡುಲ್ಕರ್ ದಾಖಲೆಯನ್ನು ಸರಿಗಟ್ಟಿದ್ದು, ಇದಕ್ಕೆ ಕ್ರಿಕೆಟ್ ದೇವರು ಶುಭಾಶಯ ಕೋರಿದ್ದಾರೆ.

ಕೊಹ್ಲಿ ಇಂದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಸಚಿನ್ ದಾಖಲೆ ಸರಿಗಟ್ಟಿ ತಮ್ಮ ಜನ್ಮದಿನವನ್ನು ಅವಿಸ್ಮರಣೀಯ ಆಗಿಸಿಕೊಂಡಿದ್ದಾರೆ.
ಏಕದಿನ ಕ್ರಿಕೆಟ್​ನಲ್ಲಿ 49ನೇ ಶತಕ ಬಾರಿಸುವ ಮೂಲಕ ಸಚಿನ್ ತೆಂಡುಲ್ಕರ್ ಮಾಡಿದ್ದ ಅದೇ ಸಾಧನೆಯನ್ನು ಸರಿಗಟ್ಟಿದ್ದಾರೆ.

ಶುಭಾಶಯ ಕೋರಿದ ತೆಂಡುಲ್ಕರ್, ಈ ವರ್ಷದ ಆರಂಭದಲ್ಲಿ 49ರಿಂದ 50ಕ್ಕೆ ಹೋಗಲು ನನಗೆ 365 ದಿನಗಳು ಬೇಕಾದವು. ನೀವು 49ರಿಂದ 50ಕ್ಕೆ ಹೋಗಿ ಮುಂದಿನ ಕೆಲವು ದಿನಗಳಲ್ಲಿ ನನ್ನ ದಾಖಲೆಯನ್ನು ಮುರಿಯುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!