CINE | ಶೀಘ್ರವೇ ಒಟಿಟಿಗೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದ್ಯಾ ಛಾವಾ? ಯಾವ ಒಟಿಟಿ ಇಲ್ಲಿದೆ ಡೀಟೇಲ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

‘ಛಾವಾ’ ಸಿನಿಮಾ ಬಾಕ್ಸ್ ಆಫೀಸ್ ಅನ್ನು ಕೊಳ್ಳೆ ಹೊಡೆಯುತ್ತಿದೆ. ಹಲವು ಹಳೆಯ ದಾಖಲೆಗಳನ್ನು ಮುರಿದು ಇನ್ನೂ ತುಂಬಿದ ಗೃಹಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಹಿಂದಿಯಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಇತ್ತೀಚೆಗಷ್ಟೆ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗಿ, ಆಂಧ್ರ, ತೆಲಂಗಾಣಗಳಲ್ಲಿಯೂ ಸಹ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್‌ ಆಗುವ ಚಾನ್ಸಸ್‌ ಇದೆ.

ಈಗಲೂ ಥಿಯೇಟರ್‌ಗಳಲ್ಲಿ ಅಬ್ಬರಿಸುತ್ತಿರುವ ಛಾವಾ ಕೆಲ ದಿನಗಳ ನಂತರ ನೆಟ್‌ಫ್ಲಿಕ್ಸ್‌ಗೆ ಕಾಲಿಡಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ‘ಛಾವಾ’ ಸಿನಿಮಾದ ಡಿಜಿಟಲ್ ಹಕ್ಕುಗಳನ್ನು ನೆಟ್​ಫ್ಲಿಕ್ಸ್​ ಖರೀದಿ ಮಾಡಿದ್ದು, ಬಲು ಅದ್ಧೂರಿಯಾಗಿ ಸಿನಿಮಾವನ್ನು ಒಟಿಟಿ ವೇದಿಕೆಗೆ ರಿಲೀಸ್ ಮಾಡಲಿದೆಯಂತೆ. ಏಪ್ರಿಲ್ 11 ರಂದು ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಅಗಲಿದೆ. ಚಿತ್ರಮಂದಿರಗಳಲ್ಲಿ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಮಾತ್ರವೇ ಬಿಡುಗಡೆ ಆದ ಈ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿಯೂ ಲಭ್ಯವಿರಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಇನ್ನಷ್ಟೆ ಅಧಿಕೃತ ಮಾಹಿತಿ ಹೊರಹಾಕಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!