July 14, 2026
Tuesday, July 14, 2026
spot_img

ಇನ್ನೂ ಅಪ್ಡೇಟ್‌ ಆಗಿ ರಾಜ್ಯಕ್ಕೆ ಎಂಟ್ರಿ ಕೊಡಲಿದ್ಯಾ ಕೋವಿಡ್‌? ಆತಂಕ ಪಡುವ ಅವಶ್ಯಕತೆ ಇದೆಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾಲ್ಕು ವರ್ಷಗಳು ಜನರ ಬದುಕನ್ನೇ ದಿಕ್ಕಾಪಾಲಾಗಿಸಿದ್ದ ಕೊರೋನಾ ಹೆಮ್ಮಾರಿ ಇನ್ನಷ್ಟು ಅಪ್ಡೇಟ್‌ ಆಗಿ ಮತ್ತೆ ವಕ್ಕರಿಸಲು ತಯಾರಾದಂತಿದೆ. ರಾಜ್ಯದಲ್ಲಿ ಈಗಾಗಲೇ ೩೦ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್‌ ಇದೆ.

ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿರುವ ಸುದ್ದಿ ವೈರಲ್ ಆಗಿದ್ದು, ಎಂಟು ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೊಸ ರೂಪಾಂತರದ ಶಂಕೆಯಿಂದಾಗಿ ರೋಗಿಗಳ ಐದು ಸ್ಯಾಂಪಲ್‌ಗಳನ್ನು ಪುಣೆಯ ಎನ್‌ಐವಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ವರದಿಗಾಗಿ ಅಲ್ಲಿನ ಆರೋಗ್ಯ ಇಲಾಖೆ ಕಾಯುತ್ತಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದು, ಕಡಪಾದಲ್ಲಿ ಸಂಭವಿಸಿರುವ ಸಾವುಗಳು ಶಂಕಿತ ಪ್ರಕರಣಗಳು. ಇದರ ಬಗ್ಗೆ ನಾವು ಅಧಿಕೃತ ಮಾಹಿತಿ ನೀಡುತ್ತೇವೆ. ನಮ್ಮ ರಾಜ್ಯದಲ್ಲಿ ಯಾರಿಗೂ ಗಂಭೀರ ಸಮಸ್ಯೆ ಇಲ್ಲ. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಕಡ್ಡಾಯ ಪರೀಕ್ಷೆ ನಡೆಸಿದಾಗ ಮಾತ್ರ ಲಕ್ಷಣ ರಹಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯ ಇಲಾಖೆ ದಿನನಿತ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಧೈರ್ಯ ತುಂಬಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !