140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ: ಭೂತಾನ್‌ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ಪಡೆದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭೂತಾನ್‌ನ (Bhutan) ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು (Order of the Druk Gyalpo) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತಾನ್‌ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಥಿಂಪುವಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮೋದಿ, “ಈ ಗೌರವ ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತ ಮತ್ತು 140 ಕೋಟಿ ಭಾರತೀಯರ ಗೌರವ. ಭೂತಾನ್‌ನ ಈ ಮಹಾನ್ ಭೂಮಿಯಲ್ಲಿರುವ ಎಲ್ಲಾ ಭಾರತೀಯರ ಪರವಾಗಿ ನಾನು ಈ ಗೌರವವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಮತ್ತು ಈ ಗೌರವಕ್ಕಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ”ಎಂದಿದ್ದಾರೆ.

ಇಂದು ನನ್ನ ಜೀವನದಲ್ಲಿ ಬಹಳ ದೊಡ್ಡ ದಿನವಾಗಿದೆ, ನನಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಲಾಗಿದೆ. ಪ್ರತಿಯೊಂದು ಪ್ರಶಸ್ತಿಯು ವಿಶೇಷವಾಗಿದೆ, ಆದರೆ ನೀವು ಬೇರೆ ದೇಶದಿಂದ ಪ್ರಶಸ್ತಿಯನ್ನು ಸ್ವೀಕರಿಸಿದಾಗ, ಎರಡೂ ದೇಶಗಳು ಸರಿಯಾದ ಹಾದಿಯಲ್ಲಿ ಸಾಗುತ್ತಿವೆ ಎಂಬುದನ್ನು ಇದು ತೋರಿಸುತ್ತದೆ. ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಈ ಗೌರವವನ್ನು ಸ್ವೀಕರಿಸುತ್ತೇನೆ. ಇದಕ್ಕಾಗಿ ಧನ್ಯವಾದಗಳುಎಂದು ಅವರು ಹೇಳಿದರು.

ಈ ಭೇಟಿಯು ಭಾರತ ಮತ್ತು ಭೂತಾನ್ ನಡುವಿನ ನಿಯಮಿತ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯಕ್ಕೆ ಅನುಗುಣವಾಗಿದ್ದು, ನೆರೆಹೊರೆಯ ಮೊದಲ ನೀತಿಗೆ ಸರ್ಕಾರವು ಒತ್ತು ನೀಡುತ್ತದೆ. ಪಾರೋ ವಿಮಾನ ನಿಲ್ದಾಣದಲ್ಲಿ ಪ್ರಧಾನ ಮಂತ್ರಿ ತ್ಶೆರಿಂಗ್ ಟೋಬ್ಗೇ ಅವರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಭೇಟಿಯ ವೇಳೆ ಪ್ರಧಾನಿ ಮೋದಿ, ಪಿಎಂ ಟೊಬ್ಗೇ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!