ಚುನಾವಣಾ ಬಾಂಡ್ ರದ್ದುಪಡಿಸಿದ್ದಕ್ಕೆ ಮುಂದೊಮ್ಮೆ ಪಶ್ಚಾತ್ತಾಪ ಪಡೋದು ಖಂಡಿತ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆಬ್ರವರಿಯಲ್ಲಿ ಕಪ್ಪುಹಣಕ್ಕೆ ಕಡಿವಾಣ ಹಾಕುವ ಉದ್ದೇಶದ ಚುನಾವಣಾ ಠೇವಣಿ ಯೋಜನೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದಕ್ಕೆ ಮುಂದೆ ಎಲ್ಲರೂ ವಿಷಾದಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ವ್ಯವಸ್ಥೆಯನ್ನು ರದ್ದುಪಡಿಸಿದರೆ ಕಪ್ಪುಹಣಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ ಚುನಾವಣಾ ಬಾಂಡ್ ಯೋಜನೆ ಬಗ್ಗೆ ವಿರೋಧ ಪಕ್ಷಗಳು ಸುಳ್ಳನ್ನು ಹರಡುತ್ತಿವೆ. ಪ್ರಾಮಾಣಿಕವಾಗಿ ಯೋಚಿಸಿದರೆ ಎಲ್ಲರೂ ಪಶ್ಚಾತ್ತಾಪ ಪಡಬೇಕು ಎಂದರು.

ತಮ್ಮ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್‌ಗಳ ವ್ಯವಸ್ಥೆಯು ಕಪ್ಪುಹಣದ ಬಳಕೆಯನ್ನು ಎದುರಿಸುವ ಉದ್ದೇಶವಾಗಿದೆ, ಚುನಾವಣಾ ಸಮಯದಲ್ಲಿ ‘ಕಪ್ಪುಹಣ’ಕ್ಕೆ ಕಡಿವಾಣ ಹಾಕಲು ತಮ್ಮ ಸರ್ಕಾರ ಈ ಯೋಜನೆಯನ್ನು ಪರಿಚಯಿಸಿತ್ತು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!