ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ದೆಹಲಿ ಸರ್ಕಾರದಿಂದ ಗಿಫ್ಟ್ ನೀಡುವ ಸಾಧ್ಯತೆ ಇದೆ.
ಮಹಿಳೆಯರ ಖಾತೆಗೆ 2,500 ರೂ. ಹಾಕುವ ಬಗ್ಗೆ ಇಂದು ನಿರ್ಧಾರ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಬೆಳಗ್ಗೆ 10 ಗಂಟೆಗೆ ಸಿಎಂ ರೇಖಾ ಗುಪ್ತಾ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮಹಿಳೆರ ಖಾತೆಗೆ ಹಣ ಹಾಕುವ ‘ಮಹಿಳಾ ಸಮೃದ್ಧಿ ಯೋಜನೆ’ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.