ಸಿಡಬ್ಲ್ಯುಸಿ ಸಭೆಯಲ್ಲಿ 5 ರಾಜ್ಯಗಳ ಚುನಾವಣೆ ಕುರಿತು ಚರ್ಚಿಸಲಾಗುವುದು: ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೈದರಾಬಾದ್‌ನಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಪಕ್ಷದ ವರಿಷ್ಠರು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಪುನರ್‌ರಚನೆಯ ಮೊದಲ ಸಭೆ ಇದಾಗಿದೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

“ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮೊದಲ ಸಿಡಬ್ಲ್ಯೂಸಿ ಸಭೆಯಾಗಿದೆ. ನಾಳೆ ವಿಸ್ತೃತ ಕಾರ್ಯಕಾರಿ ಸಮಿತಿ ಸಭೆಯೂ ನಡೆಯಲಿದೆ, ಅಲ್ಲಿ ಪಕ್ಷಕ್ಕೆ ಸಂಬಂಧಿಸಿದ ಚರ್ಚೆಗಳನ್ನು ಮಾಡಲಾಗುತ್ತದೆ. ಕೈ ನಾಯಕರ ಸಮ್ಮುಖದಲ್ಲಿ 5 ರಾಜ್ಯಗಳಲ್ಲಿ ಮುಂಬರುವ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಮತ್ತು ಅದಕ್ಕೆ ಅನುಗುಣವಾಗಿ ಯೋಜನೆ ರೂಪಿಸಲಿದ್ದಾರೆ. ಮೈತ್ರಿಕೂಟದ (I.N.D.I.A) ಕುರಿತು ಮುಂದಿನ ಸಭೆಯಲ್ಲಿ ನಮ್ಮ ಮೈತ್ರಿಕೂಟದ ಪಾಲುದಾರರೊಂದಿಗೆ ಚರ್ಚಿಸಲಾಗುವುದು ಎಂದು ಖರ್ಗೆ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!