ಹೊಸದಿಗಂತ ಡಿಜಿಟಲ್ ಡೆಸ್ಕ್:
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿಗೆ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಅರಣ್ಯ ಪ್ರದೇಶದ ಸಫಾರಿಯನ್ನು ಪರಿಸರ ಸ್ನೇಹಿಯನ್ನಾಗಿಸಲು ಬನ್ನೇರುಘಟ್ಟ ಸಫಾರಿಗೆ ವಿದ್ಯುತ್ ಚಾಲಿತ ವಾಹನ ಬಳಕೆಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.
ವಾಹನಗಳಿಂದ ಹೆಚ್ಚುತ್ತಿರುವ ಇಂಗಾಲದ ಹೊರಹೊಮ್ಮುವಿಕೆ ತಡೆಯಲು ಅರಣ್ಯ ಇಲಾಖೆ ಪ್ರಯತ್ನ ಸಫಲವಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬನ್ನೇರುಘಟ್ಟ ಸಫಾರಿಯಲ್ಲಿ ಹೊಗೆ ರಹಿತ ವಾಹನ ಬಳಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.