ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಸ್ಪಷ್ಟನೆ ನೀಡಿದೆ .
ಮೇ. 1ರಿಂದ ಜಿಪಿಎಸ್ ಆಧಾರಿತ ಫಾಸ್ಟ್ಯಾಗ್ ಟೋಲ್ ಇರಲಿದೆ ಎಂಬ ಸುದ್ದಿಯು ಹರಿದಾಡಿತ್ತು. ಈ ವರದಿಯನ್ನು ತಳ್ಳಿ ಹಾಕಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ಸದ್ಯ ಚಾಲ್ತಿಯಲ್ಲಿರುವ ಫಾಸ್ಟ್ಯಾಗ್ (FASTag) ಟೋಲ್ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದೆ.
ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಬಗ್ಗೆ ಸಲಹೆಗಳು ಬಂದಿವೆ. ಆದರೆ ಜಾರಿಗೆ ತರುತ್ತಿಲ್ಲ. ಕೆಲವು ಕಡೆ ಪ್ರಯೋಗಿಕವಾಗಿ ಎನ್‌ಪಿಆರ್ ಫಾಸ್ಟ್ಯಾಗ್ (NPR FASTag) ಆಳವಡಿಕೆಗೆ ಚಿಂತನೆ ಮಾಡಲಾಗುತ್ತಿದೆ. ನಂಬರ್ ಪ್ಲೇಟ್ ಆಧಾರಿತ ಫಾಸ್ಟ್ಯಾಗ್ ಇದಾಗಿದ್ದು, ಇದರ ಸಾಧಕ ಭಾದಕಗಳನ್ನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದೆ.