ಕೊಹ್ಲಿಯನ್ನ ಹಿಂದಿಕ್ಕಿ ನಂ.1 ಪಟ್ಟಕ್ಕೇರುತ್ತಾರಾ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ?

ಹೊಸದಿಂಗತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಜನವರಿ 11 ರಿಂದ ಪ್ರಾರಂಭಗೊಳ್ಳಲಿದ್ದು, ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಮಹತ್ವದ ಮೈಲಿಗಲ್ಲು ಸ್ಥಾಪಿಸುಲು ಸಜ್ಜಾಗಿದ್ದಾರೆ.

ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಆಗಿರುವ ರೋಹಿತ್‌ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4,000 ರನ್‌ ಪೂರೈಸುವ ಸನಿಹದಲ್ಲಿದ್ದಾರೆ. ಈ ಮೂರು ಪಂದ್ಯಗಳ ಸರಣಿಯಲ್ಲಿ ರೋಹಿತ್‌ ಶರ್ಮಾ 147 ರನ್‌ ಪೂರೈಸಿದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4,000 ರನ್‌ ಪೂರೈಸಿದ ವಿಶ್ವದ ಹಾಗೂ ಭಾರತದ 2ನೇ ಬ್ಯಾಟರ್‌ ಎನಿಸಿಕೊಳ್ಳಲಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4,000 ರನ್‌ ಪೂರೈಸಿದ ಟಾಪ್‌ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ನಂ.1 ಸ್ಥಾನದಲ್ಲಿದ್ದಾರೆ. ಕೊಹ್ಲಿ 115 ಪಂದ್ಯಗಳಲ್ಲಿ 1 ಶತಕ, 37 ಅರ್ಧ ಶತಕಗಳೊಂದಿಗೆ 4,008 ರನ್‌ ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, 148 ಪಂದ್ಯಗಳಲ್ಲಿ 3853 ರನ್‌ ಗಳಿಸಿರುವ ರೋಹಿತ್‌ ಶರ್ಮಾ 2ನೇ ಸ್ಥಾನದಲ್ಲಿದ್ದಾರೆ.

ಈಗಾಗಲೇ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ರೋಹಿತ್ ಶರ್ಮಾ ಅವರಿಗೆ ಮತ್ತೆ ಟಿ20 ಪಂದ್ಯಗಳಿಗೆ ನಾಯಕತ್ವದ ಹೊಣೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!