ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ತಾರಾ ಕಮಲ್‌ನಾಥ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

2024ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಮತ್ತೊಂದು ಅಭ್ಯರ್ಥಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ಸಿಗ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ದೆಹಲಿಗೆ ಆಗಮಿಸಿದ್ದು, ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಕೂಡ ಬಿಜೆಪಿ ಸೇರಲು ಬಯಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಿದ್ಧತೆ ನಡೆದಿದೆ ಎನ್ನಲಾಗಿದೆ.

ಈ ಹಿಂದೆ ಕಮಲ್ ನಾಥ್ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಇದೀಗ ಬಿಜೆಪಿ ವಕ್ತಾರ ನರೇಂದ್ರ ಸಲುಜಾ ಅವರು ಕಮಲನಾಥ್ ಮತ್ತು ನಕುಲ್ ನಾಥ್ ಅವರೊಂದಿಗಿನ ಫೋಟೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅದಕ್ಕೆ ‘ಜೈ ಶ್ರೀರಾಮ್’ ಎಂದು ಶೀರ್ಷಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!