ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಶ್ರೇಷ್ಠ ಆಟಗಾರ ವಿರಾಟ್ ಕೊಹ್ಲಿ ಜೂನ್ 20 ರಂದು ಆರಂಭವಾಗಲಿರುವ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಇಂಗಿತವನ್ನು ಬಿಸಿಸಿಐ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಕೊಹ್ಲಿ ಕೆಲವು ದಿನಗಳ ಹಿಂದೆ ಬಿಸಿಸಿಐಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಲಭ್ಯವಾಗುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.
ಆದಾಗ್ಯೂ, ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ವಿರಾಟ್ ಕೊಹ್ಲಿ ಅವರೊಂದಿಗೆ ಮಾತನಾಡಿ, ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ತಕ್ಷಣದಿಂದ ಜಾರಿಗೆ ಬರುವಂತೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ 3 ದಿನಗಳಲ್ಲಿ ಕೊಹ್ಲಿ ಅವರ ಈ ಘೋಷಣೆ ಹೊರಬಿದ್ದಿದೆ.