June 19, 2026
Friday, June 19, 2026
spot_img

ಕೆಎಸ್‌ಆರ್‌ಟಿಸಿ ಪ್ರಯಾಣ ದುಬಾರಿಯಾಗಲಿದೆಯೇ?: ದರ ಹೆಚ್ಚಳಕ್ಕೆ ನಿಗಮಗಳ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬಸ್ ಪ್ರಯಾಣ ದರ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ಡೀಸೆಲ್ ಬೆಲೆ ಏರಿಕೆ ಹಾಗೂ ಸಿಬ್ಬಂದಿ ವೆಚ್ಚ ಹೆಚ್ಚಳದ ಕಾರಣ ಪ್ರಯಾಣ ದರ ಪರಿಷ್ಕರಣೆ ಮಾಡುವಂತೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಮನವಿ ಮಾಡಿವೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ಪ್ರಸ್ತಾವನೆ ಪ್ರಸ್ತಾಪಗೊಂಡಿದೆ. ಸಾರಿಗೆ ನಿಗಮಗಳ ಪ್ರಕಾರ, ವೆಚ್ಚ ಹೆಚ್ಚಳದಿಂದ ಆರ್ಥಿಕ ಒತ್ತಡ ಹೆಚ್ಚಾಗಿದ್ದು, ದರ ಏರಿಕೆ ಅನಿವಾರ್ಯವಾಗಿದೆ.

ಇದನ್ನೂ ಓದಿ:

ಈಗಾಗಲೇ 2025ರ ಜನವರಿಯಲ್ಲಿ ಬಸ್ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ದರ ಹೆಚ್ಚಳದ ಪ್ರಸ್ತಾವನೆ ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಸಾರಿಗೆ ನಿಗಮಗಳ ಮನವಿಗೆ ರಾಜ್ಯ ಸರ್ಕಾರ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಬಗ್ಗೆ ಎಲ್ಲರ ಗಮನ ನೆಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !