October 10, 2026
Saturday, October 10, 2026
spot_img

ಮತ್ತೆ ಗೆಲುವಿನ ಹಳಿ ಏರುವುದೇ ಲಖನೌ? ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಪಂತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಬಿಗ್ ಮ್ಯಾಚ್ ನಡೆಯಲಿದ್ದು, ಅದಕ್ಕಾಗಿ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂ ಸಜ್ಜಾಗಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪ್ರಸುತ್ತ ರಾಜಸ್ಥಾನ ತಂಡ 4 ಗೆಲುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಲಖನೌ ತಂಡ 4 ಸೋಲು ಕಂಡಿದ್ದು, 9ನೇ ಸ್ಥಾನದಲ್ಲಿದೆ. ಹೀಗಾಗಿ ಗೆಲುವಿನ ಹಳಿ ಏರಲು ಲಖನೌ ಈ ಪಂದ್ಯದಲ್ಲಿ ಗೆಲುವು ದಾಖಲಿಸಬೇಕಿದೆ.

ಲಖನೌ ಸೂಪರ್ ಜೈಂಟ್ಸ್ ಪ್ಲೇಯಿಂಗ್
ಐಡನ್ ಮಾರ್ಕ್ರಮ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ನಿಕೋಲಸ್ ಪೂರನ್, ಅಯುಷ್ ಬದೋನಿ, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಮಯಾಂಕ್ ಯಾದವ್, ಪ್ರಿನ್ಸ್ ಯಾದವ್, ದಿಗ್ವೇಶ್ ರಾಠಿ, ಮೋಹ್ಸಿನ್ ಖಾನ್.

ರಾಜಸ್ಥಾನ್‌ನ ಪ್ಲೇಯಿಂಗ್ ಇಲೆವೆನ್
ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೈಯರ್, ಡೊನೊವನ್ ಫೆರೆರಾ, ರವೀಂದ್ರ ಜಾಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ರವಿ ಬಿಷ್ಣೋಯ್.

Must Read