May 20, 2026
Wednesday, May 20, 2026
spot_img

ಮಂಡೆಗೆ ಪೆಟ್ಟು ಮಾಡಿಕೊಂಡಿದ್ದ ಲುಂಗಿ ಮತ್ತೆ ಆಟ ಆಡ್ತಾರಾ? ಕೋಚ್ ಮುನಾಫ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರ 10ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಆಸೆಯನ್ನು ಜೀವಂತವಾಗಿಡಲು ಡೆಲ್ಲಿಗೆ ಈ ಪಂದ್ಯ ಅತ್ಯಂತ ಮುಖ್ಯವಾಗಿದೆ.

ಈ ಮಹತ್ವದ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡದ ಪ್ರಮುಖ ವೇಗದ ಬೌಲರ್ ಲುಂಗಿ ಎನ್‌ಗಿಡಿ ಸಂಪೂರ್ಣ ಫಿಟ್ ಆಗಿದ್ದು, ಮತ್ತೆ ಆಡುವ ಹನ್ನೊಂದರಲ್ಲಿ ಸೇರಲು ಸಿದ್ಧರಾಗಿದ್ದಾರೆ ಎಂದು ಬೌಲಿಂಗ್ ಕೋಚ್ ಮುನಾಫ್ ಪಟೇಲ್ ದೃಢಪಡಿಸಿದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಪ್ರಯತ್ನದ ವೇಳೆ ಎನ್‌ಗಿಡಿಗೆ ಗಾಯವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯಕೀಯ ಪರೀಕ್ಷೆಯಲ್ಲಿ ಗಂಭೀರ ಗಾಯಗಳಿಲ್ಲ ಎಂದು ತಿಳಿದು, ಕೆಲ ದಿನಗಳ ವಿಶ್ರಾಂತಿಯ ನಂತರ ಅವರು ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಕನ್ಕಶನ್ ಪ್ರೋಟೋಕಾಲ್ ಪೂರ್ಣಗೊಳಿಸಿದ ಬಳಿಕ ಎನ್‌ಗಿಡಿ ಮತ್ತೆ ತಂಡಕ್ಕೆ ಮರಳಿದ್ದಾರೆ. ಈವರೆಗೆ ಆಡಿದ 7 ಪಂದ್ಯಗಳಲ್ಲಿ 7 ವಿಕೆಟ್ ಪಡೆದಿರುವ ಅವರು, ಡೆಲ್ಲಿ ವೇಗದ ದಾಳಿಗೆ ಮಹತ್ವದ ಶಕ್ತಿ ನೀಡುತ್ತಿದ್ದಾರೆ.

ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್ ಸೇರಿದಂತೆ ಬಲಿಷ್ಠ ಬೌಲಿಂಗ್ ಬಳಗದೊಂದಿಗೆ ಎನ್‌ಗಿಡಿ ಸೇರ್ಪಡೆ ಡೆಲ್ಲಿ ತಂಡಕ್ಕೆ ದೊಡ್ಡ ಬಲವಾಗಿದೆ. CSK ವಿರುದ್ಧದ ಈ ಪಂದ್ಯದಲ್ಲಿ ಅವರ ಪ್ರದರ್ಶನ ನಿರ್ಣಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !