ಟೂರ್ನಿಯನ್ನು ಮಿಸ್ ಮಾಡುತ್ತೇನೆ…ಭಾವನಾತ್ಮಕ ಸಂದೇಶ ರವಾನಿಸಿದ ಹಾರ್ದಿಕ್ ಪಾಂಡ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಕದಿನ ವಿಶ್ವಕಪ್ ಟೂರ್ನಿಯಿಂದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮೊಣಕಾಲು ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದಾರೆ.

ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಬೌಲಿಂಗ್ ಮಾಡುವ ಸಂದರ್ಭದಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ, ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ, ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.

“ನಾವು ವಿಶ್ವಕಪ್ ಟೂರ್ನಿಯನ್ನು ಮಿಸ್ ಮಾಡಿಕೊಳ್ಳಲಿದ್ದೇನೆ ಎನ್ನುವುದನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ನಾನು ಯಾವಾಗಲೂ ತಂಡದ ಜತೆಗೆ ಇರುತ್ತೇನೆ. ಪ್ರತಿ ಪಂದ್ಯದಲ್ಲೂ, ಪ್ರತಿ ಬಾಲ್‌ಗೂ ಭಾರತ ತಂಡದ ಪರ ಚಿಯರ್ ಮಾಡುತ್ತೇನೆ. ನೀವು ನನ್ನ ಆರೋಗ್ಯ ಚೇತರಿಕೆಯ ಕುರಿತಂತೆ ನೀಡಿದ ಹಾರೈಕೆ, ಪ್ರೀತಿ ವಿಶ್ವಾಸಕ್ಕೆ ಧನ್ಯವಾದಗಳು. ಈ ತಂಡವು ವಿಶೇಷವಾದದ್ದಾಗಿದೆ. ಪ್ರತಿಯೊಬ್ಬರು ಹೆಮ್ಮೆ ಪಡುವಂತೆ ನಾವೆಲ್ಲರೂ ಮಾಡಲಿದ್ದೇವೆ. ಪ್ರೀತಿಯಿರಲಿ, ನಿಮ್ಮವ ಹಾರ್ದಿಕ್ ಪಾಂಡ್ಯ” ಎಂದು ಬರೆದುಕೊಂಡಿದ್ದಾರೆ.

ಗಾಯದ ಸಮಸ್ಯೆಯ ಬಳಿಕ ಟೀಂ ಇಂಡಿಯಾಗೆ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದ ಹಾರ್ದಿಕ್ ಪಾಂಡ್ಯ, ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ಪ್ರಮುಖ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದರು.

ಈ ಕುರಿತಂತೆ ಐಸಿಸಿ ಇಂದು ಬೆಳಗ್ಗೆ ಈ ವಿಚಾರವನ್ನು ಖಚಿತಪಡಿಸಿದ್ದು, ಇನ್ನುಳಿದ ವಿಶ್ವಕಪ್ ಪಂದ್ಯಗಳಿಂದ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದು, ಅವರ ಬದಲಿಗೆ ವೇಗಿ ಪ್ರಸಿದ್ಧ್ ಕೃಷ್ಣ ಅವರು ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!