ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ ಎಂದು ಹೇಳಿದರು.
ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ ಎಂದರು.



