ಮುಂದಿನ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಕೆ. ಎನ್.ರಾಜಣ್ಣ

ಹೊಸದಿಗಂತ ತುಮಕೂರು :

ಮುಂದಿನ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದು ಸಚಿವ ಕೆ. ಎನ್.ರಾಜಣ್ಣ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸದಿದ್ದರೂ
ಬೇಕಾದವರನ್ನು ಗೆಲ್ಲಿಸುವುದು, ಬೇಡದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ. ಒಟ್ಟಾರೆ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿರುತ್ತೇನೆ ಎಂದರು.

ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಎಲ್ಲ ರೀತಿಯ ಪ್ರಯತ್ನ ಪಡುತ್ತಿದ್ದೇನೆ. ಮುಂದಿನ ಚುನಾವಣೆ ದೃಷ್ಟಿಯನ್ನು ಇಟ್ಟುಕೊಂಡು ಈ ಕೆಲಸ ಮಾಡಿಸುತ್ತಿಲ್ಲ.ನನ್ನ ಅಧಿಕಾರ ಮುಗಿಯುವುದರ ಒಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ. ಜೊತೆಗೆ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸುತ್ತೇನೆ ಎಂದು ನುಡಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!