Wednesday, June 7, 2023

Latest Posts

ಯಾವುದೇ ಕಾರಣಕ್ಕೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಾನು ಯಾವುದೇ ಕಾರಣಕ್ಕೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ತೀರ್ಥಹಳ್ಳಿ ತಾಲೂಕಿನ ತೂದೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಯಾವನ್ರೀ ಹೇಳಿದ್ದು ಎಂದು ಖಾರವಾಗಿ ಪ್ರಶ್ನಿಸಿದರು.

ಬಿಜೆಪಿ ಟಿಕೆಟ್ ಪಟ್ಟಿ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಯಾವುದೇ ನಿಧಾನ ಗತಿ ಆಗಿಲ್ಲ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಇನ್ನೂ ಸಮಯ ಇದೆ. ಅಷ್ಟರಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದರು.

ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರ ಕುರಿತು ವಿರೋಧ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಅಲ್ಲದೇ ಹೆಚ್ಚು ಜನಪರ ಆಗಿರುವ ಪಕ್ಷ. ಹಾಗಾಗಿ ಕೆಲವು ಕಡೆ ವಿರೋ‘ ವ್ಯಕ್ತ ಆಗಿರಬಹುದು. ಸಾಕಷ್ಟು ಕಡೆ ಆಕಾಂಕ್ಷಿಗಳು ಕೂಡ ಹೆಚ್ಚಿದ್ದಾರೆ. ಹಾಗಿರುವಾಗ ಒಬ್ಬರ ಪರ, ಇನ್ನೊಬ್ಬರ ಪರ ಅಭಿಪ್ರಾಯ ವ್ಯಕ್ತವಾಗುತ್ತಿರುತ್ತದೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!