ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕದಲ್ಲಿ ವಿನಾಯಿತಿ ನೀಡುವ ಯಾವುದೇ ಯೋಚನೆ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಪ್ರಮುಖ ಪಾಲುದಾರರಿಂದ ವ್ಯಾಪಾರ ವಹಿವಾಟಿನಲ್ಲಿ ಪ್ರತಿರೋಧ ಎದುರಾಗುವ ಸಾಧ್ಯತೆ ಇದ್ದರೂ ಉಕ್ಕು ಹಾಗೂ ಅಲ್ಯೂಮಿನಿಯಂ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡುವುದಿಲ್ಲ ಎಂದರು.
ಈಗಾಗಲೇ ನಮ್ಮ ದೇಶಕ್ಕೆ ಶತಕೋಟಿಗಟ್ಟಲೆ ಡಾಲರ್‌ನಷ್ಟು ಆರ್ಥಿಕ ಸಂಪತ್ತು ಹರಿದು ಬಂದಿದೆ. ಏ.2ರಿಂದ ಇನ್ನೂ ದೊಡ್ಡ ಪ್ರಮಾಣದಲ್ಲಿ ಹಣ ಹರಿದುಬರಲಿದೆ ಎಂದು ಹೇಳಿದರು.