Monday, October 2, 2023

Latest Posts

ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವೆ: ಸಾಕ್ಷಿ ಮಲಿಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಭಾಗವಹಿಸುತ್ತೇನೆ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ (Sakshi Malik) ಸ್ಪಷ್ಟಪಡಿಸಿದ್ದಾರೆ.

ಲೈಂಗಿಕ ಪ್ರಕರಣದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧದ ಪ್ರಕರಣದಲ್ಲಿ ಪ್ರತಿದಿನ ಆಗುತ್ತಿರುವ ಬೆಳವಣಿಗೆಯಿಂದ ಮಾನಸಿಕವಾಗಿ ಅನುಭವಿಸುತ್ತಿರುವ ಹಿಂಸೆಯನ್ನು ಯಾರೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಪೊಲೀಸರೊಂದಿಗೆ ಪ್ರತಿದಿನ ಈ ವಿಚಾರದ ಬಗ್ಗೆ ಮಾತನಾಡುತ್ತಿದ್ದೇವೆ. ಈ ವಿಚಾರ ಬಗೆಹರಿಯುವ ವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಯಾವ ತಯಾರಿಯನ್ನೂ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕುಸ್ತಿಪಟು ಸಂಗೀತಾ ಫೋಗಟ್ ಅವರನ್ನು ಘಟನೆಯ ಮರುಸೃಷ್ಟಿಗಾಗಿ ಪೊಲೀಸರು ಶುಕ್ರವಾರ ಬ್ರಿಜ್ ಭೂಷಣ್ ನಿವಾಸಕ್ಕೂ ಕರೆದೊಯ್ದಿದ್ದರು. ಈ ವೇಳೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯನ್ನು ನೆನಪಿಸಿಕೊಳ್ಳುವಂತೆ ಪೊಲೀಸರು ತಿಳಿಸಿದ್ದರು. ಅಲ್ಲದೇ ಅರ್ಧ ಗಂಟೆಗಳ ಕಾಲ ಕಿರುಕುಳ ಕುರಿತಾದ ಘಟನೆಯ ಮರುಸೃಷ್ಟಿ ಮಾಡಿ ವಾಪಾಸ್ ಆಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!