ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ ಎಸ್ಎಸ್ (RSS) ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲೆಂದೇ ಸರ್ಕಾರಿ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿ ಪಡೆಯಬೇಕೆಂಬ ನಿಯಮ ಜಾರಿಗೆ ರಾಜ್ಯ ಸರಕಾರ ಮುಂದಾಗಿದ್ದು, ಇದರ ನಡುವೆ ಕೈ ಹಿರಿಯ ನಾಯಕ ಕೆಎನ್ ರಾಜಣ್ಣ ಮಾತ್ರ ಪರೋಕ್ಷವಾಗಿ ಆರ್ ಎಸ್ಎಸ್ ಪರ ಬ್ಯಾಟಿಂಗ್ ಮಾಡಿ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ರಾಜಣ್ಣ ಮತ್ತೊಮ್ಮೆ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಗೆ ಮುಜುಗರು ಉಂಟು ಮಾಡುವಂತ ಹೇಳಿಕೆ ಕೊಟ್ಟಿದ್ದಾರೆ.
ಸರ್ಕಾರಿ ಜಾಗದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕುವ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ರಾಜಣ್ಣ, ಪರ್ಮಿಷನ್ ತಗೊಂಡು ಮಾಡಿ ಅಂತಾ ಹೇಳಿದ್ದಾರೆ ಹೊರತು ಆರ್ ಎಸ್ಎಸ್ ಬ್ಯಾನ್ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಹೇಳಿಲ್ಲ. ಸರ್ಕಾರಿ ಜಾಗದಲ್ಲಿ RSS ಆಗಲಿ ಬೇರೆ ಯಾವುದೇ ಸಂಘಟನೆ ಆಗಲಿ ಅನುಮತಿ ಪಡೆದು ಕಾರ್ಯಕ್ರಮ ಮಾಡಿ ಎಂದು ಹೇಳಿದ್ದಾರೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗುತ್ತೆ ಎನ್ನುವುದನ್ನು ನೋಡೋಣ. ಈದ್ಗಾ ಮೈದಾನದಲ್ಲಿ ರಸ್ತೆಯಲ್ಲೇ ನಮಾಜ್ ಮಾಡುತ್ತಾರೆ. ಅವರು (ಮುಸ್ಲಿಂ) ಪರ್ಮಿಷನ್ ತೆಗೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.
ರಸ್ತೆಯಲ್ಲಿ ನಮಾಜ್ ಮಾಡಲು ಪರ್ಮಿಷನ್ ಕೊಡಿ ಎಂದು ಅವರು ಬರ್ತಾರಾ? ಅಥವಾ ಪರ್ಮಿಷನ್ ತೆಗೆದುಕೊಳ್ಳಿ ಎಂದು ಹೇಳುತ್ತೀರಾ? ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಸರ್ಕಾರದ ಧೋರಣೆಗೆ ರಾಜಣ್ಣ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.