ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀರಾಮುಲು ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳು ಹರಿದಾಡುತ್ತಿರುವ ಬೆನ್ನಲೇ ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಂತೋಷ್ ಲಾಡ್, ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ, ಅವರು ನನ್ನ ಅತ್ಯಂತ ಆಪ್ತ ಸ್ನೇಹಿತ ಎಂದು ಹೇಳಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಬಿಜೆಪಿ ನಾಯಕ ಬಿ ಶ್ರೀರಾಮುಲು ನಡುವೆ ಉತ್ತಮ ಸ್ನೇಹವಿದೆ. ಹೀಗಾಗಿ ಶ್ರೀರಾಮುಲು ಏನಾದರೂ ನಮ್ಮ ಪಕ್ಷಕ್ಕೆ ಬಂದರೆ ಸಂತೋಷ ಎಂದು ತಿಳಿಸಿದ್ದಾರೆ.