May 20, 2026
Wednesday, May 20, 2026
spot_img

ಪಂಜ ರಾಜ್ಯಗಳ ಚುನಾವಣೆ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಾ? ಕೇಂದ್ರ ಸರಕಾರ ಏನು ಹೇಳುತ್ತೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾಳೆ ಪಶ್ಚಿಮ ಬಂಗಾಳದಲ್ಲಿ 2ನೇ ಸುತ್ತಿನ ಮತದಾನ ನಡೆಯಲಿದ್ದು, ಇದಾದ ಬಳಿಕ ಪಂಜ ರಾಜ್ಯಗಳ ಚುನಾವಣೆ ಅಂತ್ಯಗೊಳ್ಳಲಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ ಅನ್ನೋ ಮಾತುಗಳು ಎಲ್ಲೆಡೆ ಹರಿದಾಡುತ್ತಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲು ಮುಂದಾಗಿದ್ದು, ಅಂತಹ ಯಾವುದೇ ನಿರ್ಧಾರ ನಮ್ಮ ಮುಂದೆ ಇಲ್ಲ ಎಂದು ತಿಳಿಸಿದೆ.

ಈ ಕುರಿತು ಪೆಟ್ರೋಲಿಯಂ ಗ್ಯಾಸ್ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಜೊತೆಗೆ ಭಯಭೀತರಾಗಿ ಇಂಧನ ಖರೀದಿಗೆ ಮುಂದಾಗ್ಬೇಡಿ . ಕೇಂದ್ರ ಸರ್ಕಾರದ ಮುಂದೆ ಯಾವುದೇ ತೈಲದ ಬೆಲೆ ಏರಿಕೆ ಮಾಡುವ ಪ್ರಸ್ತಾಪ ಇಲ್ಲ. ಹೀಗಾಗಿ ನಿರಾಳರಾಗಿ ಇರುವಂತೆ ತಿಳಿಸಿದ್ದಾರೆ.

ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇಂಧನ ಇದ್ದು, ಯಾವುದೇ ಅಭಾವ ಎದುರಾಗಿಲ್ಲ. ಹೀಗಾಗಿ ಜನರು ವದಂತಿಗಳಿಗೆ ಹೆಚ್ಚು ಗಮನ ನೀಡಿದಿರಿ. ಕೇಂದ್ರ ಸರ್ಕಾರ ಯಾವುದೇ ರೀತಿಯ ಬೆಲೆ ಏರಿಕೆ ಮಾಡುತ್ತಿಲ್ಲ. ಎಲ್ಲವೂ ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !