ಕೋಚ್ ಆಗಿ ಮುಂದುವರಿಯುತ್ತಾರಾ ರಾಹುಲ್‌ ದ್ರಾವಿಡ್ ?..‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವಕಪ್‌ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಇದರಿಂದ ನಿನ್ನೆ ಭಾರತೀಯರ ನಿರೀಕ್ಷೆ ಹುಸಿಯಾಗಿದೆ.

ಈ ನಡುವೆ ಟೀಂ ಇಂಡಿಯಾ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದವು ಭಾನುವಾರ ಕೊನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಮುಂದುವರೆಯುತ್ತಾರಾ ಎನ್ನುವ ಪ್ರಶ್ನೆಗಳು ಕೇಳಿಬರುತ್ತಿವೆ. ಇದಕ್ಕೆ ಉತ್ತರಿಸಿದ ಅವರು ಭವಿಷ್ಯದ ಬಗ್ಗೆ ಯೋಚಿಸಿಲ್ಲ, ಈ ಕುರಿತು ಆಲೋಚಿಸಲು ಸಮಯ ಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!