Sunday, October 12, 2025

ಈ ಬಾರಿ ಶಾಲಾ ಪಠ್ಯದಲ್ಲಿ ಸೇರ್ಪಡೆಯಾಗಲಿದ್ಯಾ ರಾಮಾಯಣ? ಸಿಎಂ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿ ಶಾಲಾ ಪಠ್ಯದಲ್ಲಿ ರಾಮಾಯಣ ಸೇರ್ಪಡೆಯಾಗಲಿದ್ಯಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ..

ಈ ಬಾರಿ ರಾಮಾಯಣವನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ, ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.

error: Content is protected !!