spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹಿಂದಿ ಸಿನಿಮಾಗೆ ಸಂಗೀತಾ ಸಂಯೋಜನೆ ಮಾಡಲಿದ್ದಾರಾ ಕನ್ನಡದ ರವಿ ಬಸ್ರೂರು ?

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಈಗ ಹಿಂದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡ್ತಿದ್ದಾರಂತೆ.
ಹೌದು. ಅಜಯ್ ಕಪೂರ್ ಹಾಗೂ ಸುಭಾಷ್ ಕಾಳೆ ನಿರ್ಮಾಣದಲ್ಲಿ ಮೂಡಿಬರುತ್ತಿರುವ ‘ಗರುಡ್’ ಎಂಬ ಹಿಂದಿ ಚಿತ್ರಕ್ಕೆ ಕನ್ನಡದ ಬಹುಬೇಡಿಕೆಯ ರವಿ ಬಸ್ರೂರು ಸಂಗೀತ ಕೊಡಲಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ಜನರೊಂದದಿಗೆ ಹಂಚಿಕೊಂಡಿದ್ದಾರೆ. ಸದ್ಯ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಕಲಾವಿದರು, ತಂತ್ರಜ್ಞರ ಆಯ್ಕೆ ಆಗಬೇಕಿದೆ.
ಏನಿದು ಗರುಡ್? ಇತ್ತೀಚಿಗೆ ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರಲು ಭಾರತೀಯ ಸೇನೆ ನಡೆಸಿದ ಕಾರ್ಯದ ಕುರಿತು ಈ ಚಿತ್ರ ಕಥೆ ಹೊಂದಿದ್ದು, ಮುಂದಿನ ವರ್ಷ ಆಗಸ್ಟ್ 15ರಂದು ಬಿಡುಗಡೆಯಾಗುವ ನಿರೀಕ್ಷೆ ಇದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss