October 16, 2026
Friday, October 16, 2026
spot_img

ಮುಂದಿನ ಕೆಪಿಸಿಸಿ ಅಧ್ಯಕ್ಷರಾಗ್ತಾರಾ ಸತೀಶ್ ಜಾರಕಿಹೊಳಿ? ಈ ಕುರಿತು ಕೊಟ್ಟ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅಗಲಿದ್ದಾರೆ ಎಂಬ ಮಾತುಗಳು ಬಲವಾಗಿದ್ದು, ಇದರ ನಡುವೆ ಸತೀಶ್ ಜಾರಕಿಹೊಳಿ ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ದಿಲ್ಲಿಯಿಂದ ಬಂದ ಬಳಿಕ ಸಿಗಲಿದೆ ಉತ್ತರ

ಈ ಕುರಿತು ಖುದ್ದು ಪ್ರತಿಕ್ರಿಯೆ ನೀಡಿದ ಅವರು, ಊಹಾಪೋಹಗಳನ್ನು ತಳ್ಳಿಹಾಕಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ, ಬಂದ ಬಳಿಕ ಎಲ್ಲಾ ವಿಚಾರಗಳಿಗೂ ಉತ್ತರ ಸಿಗಲಿದೆ ಎಂದು ತಿಳಿಸಿದ್ದಾರೆ.

ಅವರ ನಿರ್ಧಾರಕ್ಕೆ ನಾವು ಬದ್ಧ

ಸದ್ಯ ನಮ್ಮ ನಾಯಕರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಲು ದಿಲ್ಲಿಗೆ ಹೋಗಿದ್ದಾರೆ. ಅಲ್ಲಿ ಅವರು ಏನು
ನಿರ್ಧಾರ ತೆಗೆದುಕೊಂಡರೂ ನಾವು ಸ್ವೀಕರಿಸುತ್ತೇವೆ ಎಂದು ಜಾರಕಿಹೊಳಿ ಹೇಳಿದರು.

ಈ ವೇಳೆ ಸಚಿವ ಸ್ಥಾನದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಂಪುಟ ರಚನೆಯ ಕುರಿತು ಚರ್ಚೆಗಳು ಆರಂಭವಾಗಿಲ್ಲ. ಅದೇ ರೀತಿ ನಾನು ಆಕಾಂಕ್ಷಿಯಲ್ಲ. ಚರ್ಚೆಗಳು ಶುರುವಾದಾಗ ಈ ವಿಷಯದ ಬಗ್ಗೆ ನಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.

ಎಲ್ಲ ಪ್ರಶ್ನೆಗಳಿಗೂ ನಾಳೆ ಸಂಜೆಯ ವೇಳೆಗೆ ಸಂಪೂರ್ಣವಾಗಿ ಉತ್ತರ ಸಿಗಲಿದೆ. ಎಷ್ಟು ಡಿಸಿಎಂ, ಯಾರಿಗೆ ಯಾವ ಸ್ಥಾನ ಎಲ್ಲವು ತಿಳಿಯಲಿದೆ ಎಂದು ತಿಳಿಸಿದರು.

Must Read