ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ವರ್ಷ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ವೇ ಉದ್ಘಾಟನೆಯಾಗಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿ, ಜೂನ್ 2026ಕ್ಕೆ ಎಕ್ಸ್‌ಪ್ರೆಸ್ ವೇ ಕಾಮಗಾರಿ ಮುಗಿಸುವ ಸಾಧ್ಯತೆ ಇದೆ. ಸದ್ಯಕ್ಕೆ 70 ಕಿ.ಮೀ ಎಕ್ಸ್‌ಪ್ರೆಸ್ ವೇ ಪೂರ್ಣಗೊಂಡಿದೆ. ಆರ್ಥಿಕವಾಗಿ ಎರಡು ನಗರಗಳಿಗೆ ಇದು ಸಹಕಾರಿಯಾಗಲಿದೆ. ಒಟ್ಟು 17,000 ಕೋಟಿಯ ಪ್ರಾಜೆಕ್ಟ್ ಇದಾಗಿದ್ದು, ಒಟ್ಟು 260 ಕಿ.ಮೀ ಉದ್ದದ ರಸ್ತೆ ಇದಾಗಿದೆ. ಬೆಂಗಳೂರು ಟು ಚೆನ್ನೈ ಅಂದಾಜು 2 ರಿಂದ 2:30 ಗಂಟೆಯಲ್ಲಿ ತಲುಪಬಹುದು ಎಂದು ತಿಳಿಸಿದರು.
ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್ ವೇನಲ್ಲಿ ಒಂದಾಗಿರುವ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ ಕರ್ನಾಟಕ ಭಾಗದಲ್ಲಿ ಸಂಚಾರಕ್ಕೆ ಮುಕ್ತವಾಗಿದೆ. ಈ ಹೆದ್ದಾರಿ ಎರಡು ಪ್ರಮುಖ ನಗರಗಳ ನಡುವೆ ಉತ್ತಮ ಸಂಪರ್ಕ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.