ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಬಜೆಟ್ ಮಂಡನೆಗೆ ಇನ್ನೇನು ಕ್ಷಣಗಣನೆ ಆರಂಭವಾಗಲಿದೆ. ಭಾರಿ ಕುತೂಹಲ ಮೂಡಿಸಿರುವ ರಾಜ್ಯ ಬಜೆಟ್ ನಲ್ಲಿ ಯಾವೆಲ್ಲ ರೀತಿಯ ಅನುದಾನ ಬಿಡುಗಡೆ ಮಾಡಲಿದ್ದಾರೆ ಸಿದ್ದರಾಮಯ್ಯ ಅನ್ನೋದು ನೋಡಬೇಕಿದೆ.
ಇನ್ನು ರಾಜ್ಯದಲ್ಲಿರುವ ಪುರಾತನ ರಾಮ ಮಂದಿರಗಳ ಪುನರುಜ್ಜೀವಕ್ಕೆ ರಾಜ್ಯ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುತ್ತ ಸರ್ಕಾರ ಎಂಬ ಪ್ರಶ್ನೆ ಮೂಡಿದೆ. ಯಾವ ರೀತಿಯಾಗಿ ಹಣ ಬಿಡುಗಡೆ ಮಾಡಲಿದ್ದಾರೆ ಹಾಗೂ ಯಾವ ಯೋಜನೆಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಡಲಿದ್ದಾರೆ ಎನ್ನುವದೇ ಕುತೂಹಲ ಮೂಡಿಸಿದೆ.
ಸಿದ್ಧರಾಮಯ್ಯ ಅವರು ಬೆಳಗ್ಗೆ 10:15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ 3.75 ಲಕ್ಷ ಕೋಟಿ ಮತ್ತು 3.8 ಲಕ್ಷ ಕೋಟಿ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ. ಬಜೆಟ್ ಮಂಡನೆಗೂ ಮುನ್ನ ಬೆಳಗ್ಗೆ 9:30ಕ್ಕೆ ಸಚಿವ ಸಂಪುಟ ಸಭೆಯನ್ನೂ ಸಿಎಂ ಕರೆದಿದ್ದಾರೆ.