October 16, 2026
Friday, October 16, 2026
spot_img

ಸೆಪ್ಟೆಂಬರ್‌ನಲ್ಲಿ ಕೈಕೊಡಲಿದೆಯೇ ಮಳೆ? ನೀರಿಗಾಗಿ ಈಗಿನಿಂದಲೇ ಶುರುವಾಯ್ತು ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಕುಸಿಯುವ ಭೀತಿ ಎದುರಾಗಿದ್ದು, ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಮಳೆಯ ಅಭಾವದ ಮುನ್ಸೂಚನೆ ಇರುವುದರಿಂದ ಅಧಿಕಾರಿಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ತಿಳಿಸಿದರು.

ಹವಾಮಾನ ಇಲಾಖೆಯ ವರದಿಯಂತೆ ಆಗಸ್ಟ್‌ನಲ್ಲಿ ಸಾಧಾರಣ ಮಳೆಯಾದರೂ, ಸೆಪ್ಟೆಂಬರ್‌ನಲ್ಲಿ ಮಳೆ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ.

ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅದಕ್ಕೆ ನೇರವಾಗಿ ಆಯಾ ಜಿಲ್ಲಾಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು. ಕಂದಾಯ, ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕು. ನೀರು ಪೂರೈಕೆಗೆ ಬೇಕಾದ ಹಣಕಾಸಿನ ನೆರವು ನೀಡಲು ಸರ್ಕಾರ ಸಿದ್ಧವಿದೆ. ಈ ಬಗ್ಗೆ ಈಗಾಗಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗಿದೆ.

Must Read