July 31, 2026
Friday, July 31, 2026
spot_img

ಕೇರಳ ರಾಜ್ಯ ಇನ್ಮುಂದೆ ‘ಕೇರಳಂ’ ಆಗಲಿದೆಯೇ? ಕೇಂದ್ರ ಕ್ಯಾಬಿನೆಟ್ ನಲ್ಲಿ ಸಿಗಲಿದೆಯೇ ಗ್ರೀನ್ ಸಿಗ್ನಲ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿದ್ದು, ಇದರ ನಡುವೆ ಆಡಳಿತ ಸರಕಾರ ಕೇರಳ ರಾಜ್ಯದ ಹೆಸರನ್ನು ಬದಲಾಯಿಸಾಲು ಮುಂದಾಗಿದೆ.

ಇದರ ಭಾಗವಾಗಿ ಇಂದು ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯು ಕೇರಳದ ಹೆಸರನ್ನು “ಕೇರಳಂ” ಎಂದು ಬದಲಾಯಿಸುವ ಮಸೂದೆಯನ್ನು ಅನುಮೋದಿಸುವ ನಿರೀಕ್ಷೆಯಿದೆ.

ಈಗಾಗಲೇ ಕೇರಳ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದ್ದು, ಇಂದು ಸಚಿವ ಸಂಪುಟ ಇದನ್ನು ಅನುಮೋದಿಸಿದರೆ, ಸಂವಿಧಾನದ ಎಂಟನೇ ವೇಳಾಪಟ್ಟಿಯನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಅಂತಿಮ ಶಿಫಾರಸನ್ನು ಕಳುಹಿಸಲಾಗುತ್ತದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2024ರಲ್ಲಿ ರಾಜ್ಯದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಮಾಡಿದ್ದರು. ಈ ನಿರ್ಧಾರವನ್ನು ರಾಜ್ಯದ ಭಾಷಾ ಗುರುತು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅಧಿಕೃತವಾಗಿ ಗುರುತಿಸುವತ್ತ ಮಹತ್ವದ ಹೆಜ್ಜೆಯಾಗಿ ನೋಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !